ಜಾರ್ಖಂಡ್: ಕಾರು ಅಪಘಾತದಲ್ಲಿ ಮಗು ಸೇರಿ, 4 ಮಂದಿ ಮೃತ್ಯು
ಜಾರ್ಖಂಡ್: ಧನ್‌ಬಾದ್‌ನಲ್ಲಿ ಮಂಗಳವಾರ ಸಂಭವಿಸಿದ ಕಾರು ಅಪಘಾತದಲ್ಲಿ ಒಂದು ಮಗು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 2ರ ಹಿಂದ್ ಹೋಟೆಲ್ ಬಳಿ ಈ ಘಟನೆ ನಡೆದಿದೆ.
ಸ್ಥಳಕ್ಕಾಗಮಿಸಿದ ಸ್ಥಳೀಯ ಪೊಲೀಸ್ ತಂಡ, ಅಲ್ಲಿ ನೆರೆದಿದ್ದ ಸ್ಥಳೀಯರ ನೆರವಿನಿಂದ ಐವರನ್ನು ವಾಹನದಿಂದ ಹೊರತೆಗೆದಿದ್ದಾರೆ. ಆದರೆ, ಕಾರಿನಲ್ಲಿದ್ದ ಐವರು,ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಮತ್ತು ಒಂದು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂಲಗಳ ಪ್ರಕಾರ ಎಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು ಎಂದು ತಿಳಿದು ಬಂದಿದೆ.





