February 2, 2026

ಎಸೆಸೆಲ್ಸಿ ಫಲಿತಾಂಶ ಪ್ರಕಟ – ಈ ಬಾರಿ ಶೇ.83.89 ಫಲಿತಾಂಶ ದಾಖಲು

0
IMG-20230507-WA0031.jpg

ಬೆಂಗಳೂರು: 2022-23ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದೆ, ಈ ಬಾರಿ ಶೇ.83.89ರಷ್ಟು ಫಲಿತಾಂಶ ದಾಖಲಾಗಿದೆ. ನಾಲ್ವರು ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿ ಸಾಧನೆ ಮಾಡಿದ್ದಾರೆ. ರಾಜ್ಯದ 11 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.

ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ(ಕೆಎಸ್ ಇಎಬಿ ) ಪತ್ರಿಕಾಗೋಷ್ಟಿ ಫಲಿತಾಂಶ ಪ್ರಕಟಿಸಿದೆ.

ಎಸೆಸೆಲ್ಸಿ ಪರೀಕ್ಷೆ 2023 ಮಾರ್ಚ್ 31 ರಂದು ಪ್ರಾರಂಭವಾಗಿದ್ದು, ಏಪ್ರಿಲ್ 15, 2023 ರಂದು ಕೊನೆಗೊಂಡಿತ್ತು.ಈ ಪರೀಕ್ಷೆಗೆ ರಾಜ್ಯದ್ಯಾಂತ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 15,498 ಶಾಲೆಯ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ರಾಜ್ಯಾದ್ಯಂತ ಒಟ್ಟು 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಬಂದ ಉತ್ತರ ಪತ್ರಿಕೆಗಳನ್ನು ತಿದ್ದಲು 63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು

ವಿದ್ಯಾರ್ಥಿಗಳು ಪಲಿತಾಂಶಕ್ಕಾಗಿ ಅಧಿಕೃತ ವೆಬ್‌ಸೈಟ್‌ https://kseab.karnataka.gov.in/ ಅಥವಾ https://karresults.nic.in/ ಪಡೆಯಬಹುದು .

ಕಳೆದ ಬಾರಿ ಅಂದರೆ 2022 ರಲ್ಲಿ, ಒಟ್ಟಾರೆ ಉತ್ತೀರ್ಣ ಶೇಕಡಾ 85.63 ರಷ್ಟು ದಾಖಲಾಗಿತ್ತು.

Leave a Reply

Your email address will not be published. Required fields are marked *

error: Content is protected !!