March 16, 2026

ಮಂಗಳೂರು: RSS ಮುಖಂಡ ಸತೀಶ್‌ ಪ್ರಭು ಕಾಂಗ್ರೆಸ್‌ಗೆ ಸೇರ್ಪಡೆ

0
IMG-20230507-WA0152.jpg

ಮಂಗಳೂರು: RSS, ಬಿಜೆಪಿಯ ಹಿರಿಯ ಮುಖಂಡ ಸತೀಶ್‌ ಪ್ರಭು ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ರವಿವಾರ ನಡೆದ ಸಮಾರಂಭದಲ್ಲಿ ಸತೀಶ್‌ ಪ್ರಭು ಅವರು ರಜತ್‌ ಆರ್‌.ಕಾಮತ್‌, ದೀಕ್ಷಾ ಕಾಮತ್‌ ಮತ್ತು ಸಂತೋಷ್‌ ಶೆಟ್ಟಿ ಅವರೊಂದಿಗೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ವಿಧಾನಪರಿಷತ್‌ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್‌ ಅವರು ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿ.ಕೆ.ಹರಿಪ್ರಸಾದ್‌ ಅವರು, ಬಿಜೆಪಿ ಮುಳುಗುತ್ತಿರುವ ಹಡಗು. ಬಿಜೆಪಿ ನಾಯಕರು ಕಾಂಗ್ರೆಸ್‌ಗೆ ಸುನಾಮಿ ರೀತಿಯಲ್ಲಿ ಬರುತ್ತಿದ್ದಾರೆ. 47 ಮಂದಿ ಬಿಜೆಪಿಯ ಹಿರಿಯ ನಾಯಕರು ಕಾಂಗ್ರೆಸ್‌, ಜೆಡಿಎಸ್‌ಗೆ ಸೇರ್ಪಡೆಗೊಂಡಿದ್ದಾರೆ. ಇದರಲ್ಲಿ 6 ಮಂದಿ ವಿಧಾನಪರಿಷತ್‌ ಸದಸ್ಯರಿದ್ದಾರೆ. ಬಿಜೆಪಿ ಮುಳುಗತ್ತಿದ್ದು ಸದ್ಯ ಪೂರ್ಣ ಮುಳುಗುವುದರಲ್ಲಿ ಸಂಶಯವಿಲ್ಲ. ಈ ಬಾರಿ ಎಲ್ಲೆಡೆಯೂ ಜನರಿಂದ ಕಾಂಗ್ರೆಸ್‌ಗೆ ಅಭೂತಪೂರ್ವ ಬೆಂಬಲ ದೊರೆಯುತ್ತಿದೆ. ಕಾಂಗ್ರೆಸ್‌ ಸರಕಾರ ರಚಿಸುವುದರಲ್ಲಿ ಯಾರಿಗೂ ಸಂಶಯ ಬೇಡ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!