September 27, 2026

ಚಿನ್ನದ ಗಣಿಯಲ್ಲಿ ಬೆಂಕಿ ಅವಘಡ: 27 ಕಾರ್ಮಿಕರು ಸಾವು

0
image_editor_output_image1608104632-1683528008462.jpg

ಲಿಮಾ: ದಕ್ಷಿಣ ಪೆರುವಿನ ಚಿನ್ನದ ಗಣಿಯಲ್ಲಿ ಬೆಂಕಿ ಅವಘಡ ಸಂಭವಿಸಿ, 27 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೆರುವಿಯನ್ ಅಧಿಕಾರಿಗಳು ವರದಿ ಮಾಡಿದ್ದಾರೆ.

ಬೆಂಕಿ ಅವಘಡದಲ್ಲಿ ಸಿಲುಕಿದ್ದ 175 ಕಾರ್ಮಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಗಣಿಗಾರಿಕೆ ಕಂಪನಿ ತಿಳಿಸಿದೆ. ಗಣಿಯ ಒಂದು ಭಾಗದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಸ್ಫೋಟ ಸಂಭವಿಸಿರಬಹುದು ಎಂದು ಪ್ರಾಥಮಿಕ ತನಿಖೆಗಳು ತಿಳಿಸಿವೆ.

 

ಘಟನೆಗೆ ಕಾರಣ ಏನು ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರ ಕುಟುಂಬಸ್ಥರು ಘಟನಾ ಸ್ಥಳಕ್ಕೆ ಧಾವಿಸಿ ಕಣ್ಣೀರಿಟ್ಟರು.

Leave a Reply

Your email address will not be published. Required fields are marked *

You may have missed

error: Content is protected !!