September 27, 2026

ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಗೋ ಮಾಂಸ ವ್ಯಾಪಾರಕ್ಕೆ ಪರವಾನಿಗೆ: ಸಿ.ಎಂ. ಇಬ್ರಾಹಿಂ

0
image_editor_output_image-342221253-1683528947830.jpg

ಹುಮನಾಬಾದ್: ಚುನಾವಣೆ ಪ್ರಣಾಳಿಕೆಯಲ್ಲಿ ಚುನಾವಣಾ ಅಭ್ಯರ್ಥಿಗಳು ಒಂದೊಂದು ರೀತಿಯ ಸೌಲಭ್ಯ ಯೋಜನೆಗಳ ಭರವಸೆ ನೀಡಿದರೆ. ಇಲ್ಲಿ ಜೆಡಿಎಸ್ ಅಭ್ಯರ್ಥಿ ಗೋ ಮಾಂಸ ವ್ಯಾಪರಕ್ಕೆ ಅವಕಾಶ ಮಾಡಿಕೊಡಲಾಗುವುದು ಹೇಳಿದ್ದಾರೆ.

ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಗೋ ಮಾಂಸ ವ್ಯಾಪಾರಕ್ಕೆ ಪರವಾನಗಿ ನೀಡಲಾಗುವುದು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು.

 

ಮಣಿಪುರದ ಬಿಜೆಪಿ ಸಚಿವರೊಬ್ಬರು ನಾನು ಗೋಮಾಂಸ ತಿನ್ನುತ್ತೇನೆ ಎನ್ನುತ್ತಾರೆ. ಅವರಿಗೆ ಬಿಜೆಪಿಯವರು ಏನು ಮಾಡಿದ್ದೀರಿ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆಯಿಂದ ರೈತರು ಕಂಗಾಲಾಗಿದ್ದಾರೆ. ಹೈನುಗಾರಿಕೆ ಮಾಡುವುದಕ್ಕಾಗಿ ರೈತರು 60–70 ಸಾವಿರ ನೀಡಿ ಹಸುಗಳನ್ನು ತಂದರೆ ಅದು ಹಾಲು ನೀಡದಿದ್ದರೆ ಮಾರಾಟ ಮಾಡಿ ಮತ್ತೊಂದು ಹಸು ತರಲು ಅನುಕೂಲ ಆಗಲಿದೆ.

ಆದರೆ, ಈ ಕಾಯ್ದೆ ಜಾರಿ ಇರುವುದರಿಂದ ರೈತರು ಯಾರಿಗೆ ಮಾರಾಟ ಮಾಡಬೇಕು? ಹಾಗಾಗಿ, ಗೋ ಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಗೊಳಿಸಲಾಗುವುದು’ ಎಂದಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!