September 27, 2026

ದುಷ್ಕರ್ಮಿಯಿಂದ ಗುಂಡಿನ ದಾಳಿ: ತೆಲಂಗಾಣ ನ್ಯಾಯಾಧೀಶರ ಪುತ್ರಿ ಸಾವು

0
image_editor_output_image479073548-1683535744138.jpg

ಅಮೆರಿಕ: ಇತ್ತೀಚೆಗೆ ಅಮೆರಿಕದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತ ಯುವತಿ ಸಾವನ್ನಪ್ಪಿದ್ದಾರೆ. ಟೆಕ್ಸಾಸ್‌ನ ಡಲ್ಲಾಸ್‌ನಿಂದ ಉತ್ತರಕ್ಕಿರುವ 25 ಕಿಲೋಮೀಟರ್ ದೂರದಲ್ಲಿರುವ ಅಲೆನ್ ಪ್ರೀಮಿಯರ್ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಶನಿವಾರ ಮಧ್ಯಾಹ್ನ 3.30ರ ಸುಮಾರಿಗೆ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದ. ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು, ಇತರ ಏಳು ಮಂದಿ ಗಾಯಗೊಂಡಿದ್ದರು.

ತೆಲಂಗಾಣದ ತಾಟಿಕೊಂಡ ಐಶ್ವರ್ಯಾ ಅವರೂ ಕೂಡ ಈ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

 

ಐಶ್ವರ್ಯಾ ಅವರ ತಂದೆ ನರಸಿರೆಡ್ಡಿ ರಂಗಾರೆಡ್ಡಿ ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿ ಕೆಲಸ ಮಾಡುತ್ತಿದ್ದಾರೆ.

ಶನಿವಾರ ಶಾಪಿಂಗ್ ಮಾಲ್ಗೆ ತೆರಳಿದ್ದಾಗ ಕಪ್ಪು ಕಾರಿನಲ್ಲಿ ಬಂದ ದುಷ್ಕರ್ಮಿ ಅಂಗಡಿಗಳ ಹೊರಗಿನಿಂದ ಗುಂಡಿನ ದಾಳಿ ನಡೆಸಿದ್ದ. ನಂತರ ಪೊಲೀಸರು ಸ್ಥಳಕ್ಕಾಗಮಿಸಿ ದಾಳಿಕೋರನ ಮೇಲೆ ಪ್ರತಿದಾಳಿ ನಡೆಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!