August 21, 2026

ಸುಳ್ಯದ ಮಹಿಳೆಗೆ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ವಂಚನೆ

0
Phone-scam-hacker-1024x857.jpg

ಸುಳ್ಯ: ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ದೂರವಾಣಿ ಮೂಲಕ ಲಕ್ಷಾಂತರ ಹಣ ವಂಚಿಸಿದ ಕುರಿತು ನೆಲ್ಲೂರು ಕೆಮ್ರಾಜೆ ಗ್ರಾಮದ ಮಹಿಳೆಯೊಬ್ಬರು ಉಡುಪಿ ಸೈಬರ್ ಕ್ರೈಮ್ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ನೆಲ್ಲೂರು ಕೆಮ್ರಾಜೆ ಗ್ರಾಮದ ಪೂರ್ಣಿಮಾ ಎಂಬವರಿಗೆ ಅಪರಿಚಿತರು ದೂರವಾಣಿ ಕರೆ ಮಾಡಿ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಅವರಿಂದ 4,31,500 ರೂಪಾಯಿಗಳನ್ನು ತನ್ನ ಖಾತೆಗೆ ಜಮೆ ಮಾಡಿಸಿಕೊಂಡಿದ್ದಾರೆ. ಈಗ ಉದ್ಯೋಗ ನೀಡದೇ ವಂಚಿಸಿದ್ದಾರೆ.

ಈ ಹಣವನ್ನು ವಾಪಾಸ್ ಮರಳಿಸಬೇಕೆಂದು ಉಡುಪಿಯ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ನ.21ರಂದು ದೂರು ನೀಡಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!