March 16, 2026

ಸೇತುವೆಯಿಂದ ಉರುಳಿ ಬಿದ್ದ ಬಸ್: 15 ಪ್ರಯಾಣಿಕರು ಸಾವು, 25ಕ್ಕೂ ಹೆಚ್ಚು ಜನರಿಗೆ ಗಾಯ

0
image_editor_output_image267774782-1683609751095.jpg

ಖಾರ್ಗೋನ್: ಸೇತುವೆಯಿಂದ ಬಸ್ ಬಿದ್ದ ಪರಿಣಾಮ 15 ಪ್ರಯಾಣಿಕರು ಸಾವನ್ನಪ್ಪಿ, 25 ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಖಾರ್ಗೋನ್ ಜಿಲ್ಲೆಯಲ್ಲಿ ಇಂದೋರ್ ಮಾರ್ಗವಾಗಿ ತೆರಳುತ್ತಿದ್ದ ಬಸ್ ಸೇತುವೆಯಿಂದ ಉರುಳಿ ಬಿದ್ದಿದೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ. ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂ. ಸಣ್ಣ ಗಾಯಾಳುಗಳಿಗೆ 25 ಸಾವಿರ ರೂ. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಗೆ ಮಧ್ಯಪ್ರದೇಶ ಸರ್ಕಾರ ವ್ಯವಸ್ಥೆ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!