March 16, 2026

ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆ

0
image_editor_output_image493639351-1683613450686.jpg

ಗುಜರಾತ್ : ಬೈಕ್ ನಲ್ಲಿ ಬಂದ ಅಪರಿಚಿತರು ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಂದ ಘಟನೆ ನಡೆದಿದೆ.

ಗುಜರಾತ್‌ನ ವಲ್ಸಾದ್ ಜಿಲ್ಲೆಯ ವಾಪಿ ಪಟ್ಟಣದಲ್ಲಿ ನಡೆದಿದೆ. ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೋಟರ್‌ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಕೊಚರ್ವ ಗ್ರಾಮದ ಶೈಲೇಶ್ ಪಟೇಲ್ ಅವರ ಕಾರಿನ ಬಳಿ ಬಂದು ಅವರ ಮೇಲೆ ಮೂರು-ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಡುಂಗರಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶೈಲೇಶ್ ಪಟೇಲ್ ಅವರು ಬಿಜೆಪಿಯ ವಾಪಿ ತಾಲೂಕು ಘಟಕದ ಉಪಾಧ್ಯಕ್ಷರಾಗಿದ್ದರು.

ಬೆಳಗ್ಗೆ 7.30ರ ಸುಮಾರಿಗೆ ಪಟೇಲ್ ತನ್ನ ಪತ್ನಿಯೊಂದಿಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಪತ್ನಿಗಾಗಿ ವಾಹನದಲ್ಲಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಬ್ಧ ಕೇಳಿದ ಪಟೇಲ್ ಅವರ ಪತ್ನಿ ಸ್ಥಳಕ್ಕೆ ಧಾವಿಸಿ ನೋಡಿದಾಗ ಪತಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಸಹಾಯಕ್ಕಾಗಿ ಕೂಗಿದ್ದಾರೆ. ಅವರನ್ನು ವಾಪಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಲ್ಲಿ ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು ಎಂದು ಅಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!