March 16, 2026

ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ: ಪೊಲೀಸರಿಂದ ಪರಿಶೀಲನೆ

0
image_editor_output_image-1600994264-1683619532780.jpg

ಬೆಂಗಳೂರು: ಶಾಲೆಯಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಇ-ಮೇಲ್ ಬಂದ ಪ್ರಕರಣ ಅನೇಕಲ್‍ನಲ್ಲಿ ಮಂಗಳವಾರ ನಡೆದಿದೆ.

ತಾಲೂಕಿನ ಹೆಬ್ಬಗೋಡಿಯ ಖಾಸಗಿ ಶಾಲೆಯೊಂದರ ಇ-ಮೇಲ್ ವಿಳಾಸಕ್ಕೆ ಬಾಂಬ್ ಬೆದರಿಕೆ ಬಂದಿದೆ. ಆತಂಕಗೊಂಡ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದಿರುವ ಹೆಬ್ಬಗೋಡಿ ಪೊಲೀಸರು ಸಿಬ್ಬಂದಿಯನ್ನು ಹೊರಕ್ಕೆ ಕಳುಹಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಶಾಲೆಯಲ್ಲಿ ದಾಖಲಾತಿ ಪ್ರಕ್ರಿಯೆ ನಡೆಯುತ್ತಿತ್ತು. ಈ ವೇಳೆ ಬೆದರಿಕೆ ಇ-ಮೇಲ್ ಬಂದಿದೆ. ಕೂಡಲೇ ದಾಖಲಾತಿ ಪ್ರಕ್ರಿಯೆ ನಿಲ್ಲಿಸಿ, ಪೊಲೀಸರಿಗೆ ಮಾಹಿತಿ ನೀಡಿರುವುದಾಗಿ ಸಿಬ್ಬಂದಿ ತಿಳಿಸಿದ್ದಾರೆ. ಕೆಲ ತಿಂಗಳ ಹಿಂದೆ ಸಹ ಶಾಲೆಗೆ ಇಂತಹ ಬೆದರಿಕೆ ಇ-ಮೇಲ್ ಬಂದಿತ್ತು.

Leave a Reply

Your email address will not be published. Required fields are marked *

error: Content is protected !!