March 16, 2026

ಮಂಗಳೂರು: ಮತಗಟ್ಟೆಯೊಳಗೆ ಮೊಬೈಲ್ ಕೊಂಡೊಯ್ಯುವಂತಿಲ್ಲ: ಜಿಲ್ಲಾಧಿಕಾರಿ ವಾರ್ನಿಂಗ್

0
dc-ravi.jpg

ಮಂಗಳೂರು: ವಿಧಾನಸಭಾ ಚುನಾವಣೆಗೆ ಅಂತಿಮ ಹಂತದ ಸಿದ್ಧತೆ ನಡೆಸಲಾಗಿದ್ದು, ಮತದಾನ ಕೇಂದ್ರದೊಳಗೆ ಮೊಬೈಲ್ ಕೊಂಡೊಯ್ಯುವಂತಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರವಿಕುಮಾರ್ ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತಗಟ್ಟೆಯೊಳಗೆ ಓರ್ವ ಅಧಿಕಾರಿಗೆ ಮಾತ್ರ ಮೊಬೈಲ್ ಕೊಂಡೊಯ್ಯಲು ಅವಕಾಶವಿದೆ. ಉಳಿದಂತೆ ಯಾವುದೇ ಅಧಿಕಾರಿಗೆ ಮೊಬೈಲ್ ಕೊಂಡೊಯ್ಯಲು ಅವಕಾಶವಿಲ್ಲ ಎಂದಿದ್ದಾರೆ.

ಮತದಾರರೂ ಕೂಡ ಕೇಂದ್ರದೊಳಗೆ ಮೊಬೈಲ್ ಕೊಂಡೊಯ್ಯುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಇನ್ನು ಮತದಾರರ ಮೊಬೈಲ್, ಟ್ಯಾಬ್, ಲ್ಯಾಪ್ ಟಾಪ್ ಸೇರಿದಂತೆ ಯಾವುದೇ ವಸ್ತುಗಳನ್ನು ಒಳಗೆಡೆ ಕೊಂಡೊಯ್ಯಲು ಅನುಮತಿ ಇಲ್ಲ ಎಂದ ಅವರು, ಈ ಬಗ್ಗೆ ನಾವು ಯಾವುದೇ ಜವಾಬ್ದಾರಿಯನ್ನು ಹೊತ್ತುಕೊಳ್ಳುವುದಿಲ್ಲ ಎಂಡು ದ.ಕ. ಜಿಲ್ಲಾಧಿಕಾರಿ ಡಾ. ರವಿಕುಮಾರ್ ಮಾಹಿತಿ ನೀಡಿದ್ದಾರೆ.”

Leave a Reply

Your email address will not be published. Required fields are marked *

error: Content is protected !!