ಮದ್ಯಪಾನ ಮಾಡಿ ಚುನಾವಣಾ ಕರ್ತವ್ಯಕ್ಕೆ ಬಂದ ಇಬ್ಬರು ಸಿಬ್ಬಂದಿಯ ಅಮಾನತು
ಶಿವಮೊಗ್ಗ: ಚುನಾವಣಾ ಕರ್ತವ್ಯಕ್ಕೆ ಪಾನಮತ್ತರಾಗಿ ಆಗಮಿಸಿದ್ದ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಅಮಾನತುಗೊಂಡವರನ್ನು ಮಾಲತೇಶ್ ಹಾಗು ರಮೇಶ್ ಎಂದು ಗುರುತಿಸಲಾಗಿದೆ. ರಮೇಶ್ ತೋಟಗಾರಿಕೆ ಇಲಾಖೆಯ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರೆ ಮಾಲತೇಶ್ ಶಿಕ್ಷಕರಾಗಿದ್ದರು.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಸ್ಟರಿಂಗ್‌ನಲ್ಲಿ ಇಬ್ಬರೂ ಪಾನಮತ್ತರಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ಇದನ್ನು ಗಮನಿಸಿದ ಚುನಾವಣಾ ಅಧಿಕಾರಿ ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿದ್ದರು.
ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ಬಳಿಕ ಇವರಿಬ್ಬರೂ ಪಾನಮತ್ತರಾಗಿರುವುದು ಸಾಬೀತಾಗಿದೆ. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಇಬ್ಬರನ್ನೂ ಅಮಾನತು ಮಾಡುವಂತೆ ಆದೇಶ ನೀಡಿದ್ದಾರೆ.




