March 16, 2026

ಮತಯಂತ್ರಗಳನ್ನು  ಒಡೆದು ಪುಡಿಪುಡಿ ಮಾಡಿದ ಗ್ರಾಮಸ್ಥರು

0
image_editor_output_image236073423-1683706319460.jpg

ವಿಜಯಪುರ: ತಪ್ಪು ಮಾಹಿತಿಯಿಂದ ಗ್ರಾಮಸ್ಥರೇ ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮತಯಂತ್ರ ಕೆಟ್ಟಲ್ಲಿ ಬಳಕೆಗೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ (EVM), ವಿವಿಪ್ಯಾಟ್ ಮಶೀನ್‍ಗಳಾಗಿದ್ದವು. ಅವುಗಳನ್ನು ಸಿಬ್ಬಂದಿಯು ವಾಪಸ್ ತರೋದನ್ನು ಗಮನಿಸಿ ಜನರು ಪ್ರಶ್ನಿಸಿದ್ದಾರೆ. ಈ ವೇಳೆ ಸಿಬ್ಬಂದಿ ಸರಿಯಾಗಿ ಉತ್ತರಿಸದೇ ಇದ್ದಾಗ ತಪ್ಪು ಭಾವಿಸಿ ಮತಯಂತ್ರ ಒಡೆದು ಹಾಕಿದ್ದಾರೆ.

ಕಾಯ್ದಿರಿಸಲಾಗಿದ್ದ ಮತಯಂತ್ರಗಳನ್ನು ಬಿಸನಾಳ, ಡೋಣುರ ಗ್ರಾಮದಿಂದ ವಿಜಯಪುರಕ್ಕೆ ವಾಪಸ್ ತೆಗೆದುಕೊಂಡು ಬರುತ್ತಿದ್ದಾಗ ಈ ಘಟನೆ ನಡೆದಿದೆ. ಅರ್ಧಕ್ಕೆ ಮತದಾನ ಕಾರ್ಯ ಸ್ಥಗಿತಗೊಳಿಸಿ ವಾಪಸ್ ಕೊಂಡೊಯ್ಯಲಾಗುತ್ತಿದೆ ಎಂದು ತಪ್ಪು ಭಾವಿಸಿ ಮತ ಯಂತ್ರ ಒಡೆದು ಹಾಕಿದ್ದಾರೆ.

Leave a Reply

Your email address will not be published. Required fields are marked *

error: Content is protected !!