March 16, 2026

ವಿಟ್ಲ: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

0
IMG-20230510-WA0073.jpg

ವಿಟ್ಲ: ಪುತ್ತೂರು 209 ಕ್ಷೇತ್ರ ವ್ಯಾಪ್ತಿಯ ಮೇಗಿನಪೇಟೆ ಮತಗಟ್ಟೆಯಲ್ಲಿ ಬಿಜೆಪಿ ಅಭ್ಯರ್ಥಿ ಬೆಂಬಲಿಗರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಬೆಂಬಲಿಗರ ಮುಂದೆ ಕಾಂಗ್ರೆಸ್ ಜತೆಗೆ ಒಪ್ಪಂದಮಾಡಿಕೊಂಡಿದ್ದಾರಾ ಎಂಬ ಪ್ರಶ್ನೆ ಮಾಡಿದ್ದು ಮಾತಿನ ಚಮಕಿಗೆ ಕಾರಣವಾಗಿದೆ.

ವಿಟ್ಲ ಮೇಗಿನಪೇಟೆ ಮತಗಟ್ಟೆಗೆ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದ ಸಂದರ್ಭದಲ್ಲೇ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭೇಟಿ ನೀಡಿದ್ದರು. ಈ ಸಂದರ್ಭ ಬೂತ್ ನ ಹೊರಗಡೆ ಕುಳಿತ್ತಿದ್ದ ಬಿಜೆಪಿ ಕಾರ್ಯಕರ್ತರು ನೀವಿಬ್ಬರೂ ಒಂದೆಯೇ ಒಟ್ಟೋಟ್ಟಾಗಿ ಬರುತ್ತಿದ್ದೀರಿ? ನಿಮ್ಮೊಳಗಡೆ ಹೊಂದಾಣಿಕೆಯೇ ಎಂದು ಅರುಣ್ ಪುತ್ತಿಲ ಬೆಂಬಲಿಗರಿಗೆ ಪ್ರಶ್ನಿಸಿದರು. ಈ ಸಂದರ್ಭ ಇತ್ತಂಡದ ನಡುವೆ ಮಾತಿನ ಚಕಮಕಿ ನಡೆದಿದ್ದು, ಯಾರೂ ಏನು ಎಂಬುದು ಮೇ೧೩ ಗೊತ್ತಾಲಿದೆ. ಒಪ್ಪಂದ ಮಾಡಿಕೊಂಡಿದ್ದೇವೆ ಎಂಬುದನ್ನು ಮಹಾಲಿಂಗೇಶ್ವರನ ಮುಂದೆ ಬಂದು ಹೇಳಿ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಪುತ್ತಿಲ ಬೆಂಬಲಿಗರನ್ನು ಬೆಜೆಪಿ ಬೆಂಬಲಿಗರು ನೂಕಾಟ ತಳ್ಳಾಟ ಮಾಡಿದ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!