March 16, 2026

ಮೂಡಬಿದಿರೆ: ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ

0
IMG-20230510-WA0096.jpg

ಮೂಡಬಿದಿರೆ: ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ವರದಿಯಾಗಿದೆ.

ಮುಲ್ಕಿ ಮೂಡಬಿದಿರೆ ಕ್ಷೇತ್ರದ ಮೂಡುಶೆಡ್ಡೆಯಲ್ಲಿ ಮಾರಾಮಾರಿಯಾಗಿದೆ. ಪಕ್ಷ ಬೂತ್ ಗೆ ಅಭ್ಯರ್ಥಿ ಬಂದಾಗ ಜೈಕಾರ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಘರ್ಷಣೆ ನಡೆದಿದೆ.

ಈ ವೇಳೆ ಎರಡು ಪಕ್ಷದ ಕಾರ್ಯಕರ್ತರ ಮಧ್ಯೆ ಹೋಯ್ ಕಾಯ್ ನಡೆದಿದೆ ಎನ್ನಲಾಗಿದೆ. ಚುನಾವಣಾ ಪಕ್ಷದ ಬೂತ್ ಗೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ತೆರಳಿದ್ದರು. ಈ ವೇಳೆ ಘರ್ಷಣೆ ನಡೆದಿದೆ ಎನ್ನಲಾಗಿದೆ.

ಘಟನೆಯಲ್ಲಿ ಇಬ್ಬರ ತಲೆಗೆ ಗಾಯವಾಗಿದೆ ಎನ್ನಲಾಗಿದೆ. ಅಲ್ಲದೆ, ಮಹಿಳೆಯರಿಗೆ ಹಲ್ಲೆ ಆರೋಪ ವ್ಯಕ್ತವಾಗಿದೆ.

ಎರಡು ಪಕ್ಷದ ಕಾರ್ಯಕರ್ತರಿಂದ ಪರ ವಿರೋಧ ಘೋಷಣೆ ಕೂಗಿದ್ದು ಕೂಡ ಕೇಳಿ ಬಂತು. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಕೆಎಸ್ಆರ್ಪಿ ತುಕಡಿ ದೌಡಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!