ಮಂಗಳೂರು: ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಕಲ್ಲುತೂರಾಟ: ಓರ್ವ ಪೊಲೀಸ್ ಗೆ ಗಾಯ: ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಕುಲ್‌ದೀಪ್ ಆರ್ ಜೈನ್ ಭೇಟಿ
ಮಂಗಳೂರು: ಮಂಗಳೂರಿನಲ್ಲಿ ಚುನಾವಣೋತ್ತರ ಸಂಘರ್ಷ ನಡೆದಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಕಲ್ಲುತೂರಾಟ ನಡೆದಿದ್ದು, ಓರ್ವ ಪೊಲೀಸ್ ಗಾಯಗೊಂಡಿದ್ದಾರೆ.
ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್‌ದೀಪ್ ಆರ್ ಜೈನ್ ಭೇಟಿ ನೀಡಿದ್ದು, ಎರಡೂ ತಂಡದವರನ್ನು ಕರೆದು ಮಾತನಾಡಿಸುತ್ತಿದ್ದಾರೆ. ಪೊಲೀಸ್ ವಾಹನದ ಮೇಲೂ ಕಲ್ಲು ತೂರಾಟ ನಡೆದಿದೆ.
ಸ್ಥಳದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್‌ದೀಪ್ ಆರ್ ಜೈನ್ ಸೇರಿದಂತೆ ಹಲವು ಹಿರಿಯ ಪೊಲೀಸರು ಮೊಕ್ಕಾಂ ಹೂಡಿದ್ದಾರೆ. ಸದ್ಯ ಎರಡೂ ಪಕ್ಷದ ಕಾರ್ಯಕರ್ತರನ್ನು ಚದುರಿಸುವ ಕಾರ್ಯವನ್ನು ಪೊಲೀಸರು ಮಾಡುತ್ತಿದ್ದಾರೆ.




