ಮಂಗಳೂರು: ಕಾವೂರು ಸ್ಟೇಷನ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ
ಮಂಗಳೂರು: ನಗರದ ಮೂಡುಶೆಡ್ಡೆ ಬಳಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್‌ದೀಪ್ ಆರ್ ಜೈನ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಕಾವೂರು ಸ್ಟೇಷನ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಯಲ್ಲಿದ್ದು, ಮೂವರು ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಪೊಲೀಸ್ ಸಿಬ್ಬಂದಿಗೂ ಗಾಯವಾಗಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಕಮೀಷನ್ ತಿಳಿಸಿದ್ದಾರೆ




