March 16, 2026

ಚುನಾವಣೆಯ ಕರ್ತವ್ಯದಿಂದ ತಪ್ಪಿಸಲು ನಕಲಿ ಕೋವಿಡ್ ರಿಪೋರ್ಟ್ ಸಲ್ಲಿಕೆ: ಶಿಕ್ಷಕಿಯ ವಿರುದ್ಧ FIR ದಾಖಲು

0
image_editor_output_image-143936182-1683781565921.jpg

ಲಕ್ನೋ: ಮುನ್ಸಿಪಾಲ್ ಚುನಾವಣೆಯಲ್ಲಿ ಮತದಾನ ಕರ್ತವ್ಯದಿಂದ ವಿನಾಯಿತಿ ಪಡೆಯುವ ಸಲುವಾಗಿ ಪ್ರಾಥಮಿಕ ಶಾಲಾ ಶಿಕ್ಷಕಿಯೊಬ್ಬರು ನಕಲಿ ಕೋವಿಡ್-19 ಪಾಸಿಟಿವ್ ರಿಪೋರ್ಟ್ ನೀಡಿ ಸಿಕ್ಕಿಬಿದ್ದಿರುವ ಘಟನೆ ಉತ್ತರ ಪ್ರದೇಶದ ಪಿಲಿಭಿತ್‌ನ ಪುರನ್‌ಪುರ ಪ್ರದೇಶದಲ್ಲಿ ನಡೆದಿದೆ.

ಮೇ 11ರಂದು ನಡೆಯಲಿರುವ ಪುರಸಭಾ ಚುನಾವಣೆಗೆ ಆಯೋಜಿಸಿದ್ದ ಪಿಂಕ್ ಮತಗಟ್ಟೆಯ ಮತಗಟ್ಟೆ ಸಂಖ್ಯೆ 3ರಲ್ಲಿ ರಿತು ತೋಮರ್ ಅವರನ್ನು ಮತಗಟ್ಟೆಯ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.

ಇದರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಶಿಕ್ಷಕಿ ಕೋವಿಡ್ ಪಾಸಿಟಿವ್ ಎಂಬ ನಕಲಿ ದಾಖಲೆಯನ್ನು ತೋರಿಸಿ, ಚುನಾವಣಾ ಕರ್ತವ್ಯದಿಂದ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ಅಧಿಕಾರಿಗಳು ದಾಖಲೆಯನ್ನು ಪರಿಶೀಲಿಸಿದಾಗ ಅದು ಇನ್ನೊಬ್ಬ ವ್ಯಕ್ತಿಯ ದಾಖಲೆಗಳು ಎಂದು ತಿಳಿದುಬಂದಿದೆ.

ನಕಲಿ ದಾಖಲೆ ನೀಡಿದ ಶಿಕ್ಷಕಿ ಚುನಾವಣಾ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದು, ಇವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮೂಲ ಶಿಕ್ಷಾ ಅಧಿಕಾರಿ ಅಮಿತ್ ಕುಮಾರ್ ಸಿಂಗ್ ಅವರಿಗೆ ಮಂಗಳವಾರ ಆದೇಶ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!