March 16, 2026

ಕಿಡ್ನಿ ಸಮಸ್ಯೆ: ಆಸ್ಪತ್ರೆಗೆ ದಾಖಲಾದ ಶಾಸಕ ಸಿ.ಟಿ. ರವಿ

0
image_editor_output_image-830677075-1683786408049.jpg

ಚಿಕ್ಕಮಗಳೂರು: ದಿಢೀರ್ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆ ಚಿಕ್ಕಮಗಳೂರಿನ ಶಾಸಕ ಸಿ.ಟಿ. ರವಿ ಅವರು ದಿಢೀರ್‌ ತಡರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಿಡ್ನಿ ಸಮಸ್ಯೆಯಿಂದ ಬಳುತ್ತಿದ್ದ ಕಾರಣ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರನ್ನು ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಗೆ ‌ದಾಖಲಿಸಲಾಗಿದೆ. ವಿಧಾನಸಭೆ ಚುನಾವಣೆ ಚಿಕ್ಕಮಗಳೂರು ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದರು. ಆದರೆ ನಿನ್ನೆ ತಡರಾತ್ರಿ ಅವರ ಆರೋಗ್ಯದಲ್ಲಿ ವ್ಯತ್ಯಾಸ ಆಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!