March 16, 2026

ಕರ್ನಾಟಕದಲ್ಲಿ ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ಮುಖ್ಯಮಂತ್ರಿ ಆಗುತ್ತಾರೆ: ಸಚಿವೆ ಶೋಭಾ ಕರಂದ್ಲಾಜೆ

0
20230511_193905.jpg

ಬೆಂಗಳೂರು: ಕರ್ನಾಟಕದಲ್ಲಿ ಈ ಬಾರಿಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರೋದು ನಿಶ್ಚಿತ ಅಲ್ಲದೇ ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ಸಿಎಂ ಆಗುತ್ತಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ವಿಚಾರ ಬಂದಾಗ ರಾಜ್ಯ ರಾಜಕಾರಣಕ್ಕೆ ಬರುವ ಪ್ರಶ್ನೆಯೇ ಇಲ್ಲ, ನನಗೆ ಮೋದಿ ಸಂಪುಟದಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ನಾವು ಬಹುಮತ ಪಡೆದ ಸರ್ಕಾರ ರಚಿಸುವ ವಿಶ್ವಾಸ ಇದೆ ನಮ್ಮ ಕಾರ್ಯಕರ್ತರ ಸಮೀಕ್ಷೆ ಆಧಾರದಲ್ಲಿ ನೂರಕ್ಕೆ 100 ಬಿಜೆಪಿ ಬಹುಮತದ ಸರಕಾರವನ್ನು ರಚಿಸುವ ವಿಶ್ವಾಸ ಇದೆ ಎಂದು ತಿಳಿಸಿದ್ದಾರೆ

ನಮ್ಮ ವರದಿಯ ಪ್ರಕಾರ 120 ರಿಂದ 125 ಸ್ಥಾನಗಳಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರಲಿದೆ. ನಾವು ರಾಜ್ಯದಲ್ಲಿ ಸ್ವಂತ ಬಿಜೆಪಿ ಸರ್ಕಾರ ರಚನೆ ಮಾಡುತ್ತೇವೆ. ಕೆಲವು ಜಿಲ್ಲೆಗಳಲ್ಲಿ 80- 83 ಶೇಕಡಾ ಮತ ಚಲಾವಣೆ ಆಗಿದೆ. ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಮತ ಚಲಾಯಿಸಿದ ಮತದಾರರೈಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!