ಮಂಗಳೂರು: ವಿಧಾನ ಸಭೆ ಚುನಾವಣೆಯ ಮತ ಎಣಿಕೆ: ಮೇ 13 ರಂದು ಬೆಳಿಗ್ಗೆ 5.00ರಿಂದ ಮಧ್ಯರಾತ್ರಿ 12.00ಗಂಟೆ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಆದೇಶ
ಕರ್ನಾಟಕ ವಿಧಾನ ಸಭೆ ಚುನಾವಣೆ 2023ರ ಮತ ಎಣಿಕೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಮೇ 13 ರಂದು ನಿಷೇಧಾಜ್ಞೆ ಜಾರಿ ಗೊಳಿಸಿದ್ದಾರೆ. ಮೇ 13 ರಂದು ಬೆಳಿಗ್ಗೆ 5.00 ಗಂಟೆಯಿಂದ ಮಧ್ಯರಾತ್ರಿ 12.00ಗಂಟೆ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
ಕಡ್ಡಾಯವಾಗಿ ಪಾಲಿಸಬೇಕಾದ ನಿಯಮಗಳು
1) ಜಿಲ್ಲೆಯಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ or ಸಭೆ ಸಮಾರಂಭ ಜರುಗಿಸುವುದನ್ನು, ವಿಜಯೋತ್ಸವ ಆಚರಿಸುವುದನ್ನು ನಿಷೇಧಿಸಿದೆ.
2)ಯಾವುದೇ ರೀತಿಯ ಮಾರಕಾಸ್ತ್ರಗಳನ್ನು, ಕಲ್ಲು, ಕ್ಷಾರಕ ವಸ್ತುಗಳು, ಸ್ಫೋಟಕಗಳನ್ನು ಸಂಗ್ರಹಿಸುವುದು, ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.
3)ಯಾವುದೇ ಪ್ರತಿಕೃತಿ ಪ್ರದರ್ಶನ or ಸುಡುವುದನ್ನು ನಿಷೇಧಿಸಲಾಗಿದೆ.
4)ಯಾವುದೇ ಬಹಿರಂಗ ಘೋಷಣೆ ಕೂಗುವುದು, ವಾದ್ಯ ಬಾರಿಸುವುದು, ಪದ ಹಾಡುವುದು, ನಕಲಿ ಪ್ರದರ್ಶನ, ಪ್ರಚೋದನಕಾರಿ ಘೋಷಣೆ ಕೂಗುವುದು, ವ್ಯಕ್ತಿಗಳ ತೆಜೋವಧೆ ಮಾಡುವ ಕೃತ್ಯಗಳು ಇತ್ಯಾದಿಗಳನ್ನು ನಿಷೇಧಿಸಿದೆ.
5)ಸಾರ್ವಜನಿಕ ಗಾಂಭಿರ್ಯ, ನೈತಿಕತೆ, ಕಾನೂನು ಸುವ್ಯವಸ್ಥೆ ಗೆ ಭಂಗ ತರುವಂತಹ ಯಾವುದೇ ಕೃತ್ಯ ದಲ್ಲಿ ತೊಡ ಗುವುದನ್ನು ನಿಷೇಧಿಸಿದೆ.
ಈ ಮೇಲ್ಕಂಡ ಆದೇಶವನ್ನು ಉಲ್ಲಂಘಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಹಾಗೂ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ಕೋರಲಾಗಿದೆ.




