March 16, 2026

ಪ್ರೇಯಸಿಗೆ ಮಾರಣಾಂತಿಕ ಹಲ್ಲೆ ನಡೆಸಿ ಆತ್ಮಹತ್ಯೆಗೈದ ಯುವಕ

0
image_editor_output_image2134667430-1683871164808.jpg

ತುಮಕೂರು: ಪ್ರೀತಿಯಲ್ಲಿ ಬಿರುಕು ಉಂಟಾದ ಹಿನ್ನೆಲೆ ಪ್ರೇಯಸಿಯ ಕತ್ತು ಕುಯ್ದು, ಮಾರಣಾಂತಿಕವಾಗಿ ಹಲ್ಲೆ ನಡೆಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿಯ ಹುಳಿಯಾರು ಹೋಬಳಿಯ ಯಳನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಭಟ್ಟರಹಳ್ಳಿಯ ಸಿದ್ದರಾಮಯ್ಯ ಅವರ ಪುತ್ರ ಬಿ.ಎಸ್.ವಿನಯಕುಮಾರ್ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಅದೇ ಗ್ರಾಮದ ದಿ.ಕಲ್ಲೆಗೌಡರ ಪುತ್ರಿ ಕೆ.ಜೀವಿತಾ (17) ಎಂಬಾಕೆಯನ್ನು ಪ್ರೀತಿಸುತ್ತಿದ್ದ.

ಜೀವಿತಾ ದೊಡ್ಡಬಿದರೆ ಗ್ರಾಮದವಳಾಗಿದ್ದು, ತಾಯಿಯ ಜೊತೆ ಭಟ್ಟರಹಳ್ಳಿಯ ಅಜ್ಜಿ ಮನೆಯಲ್ಲಿ ವಾಸವಿದ್ದಳು. ಈಕೆ ತುಮಕೂರಿನ ಕಾಲೇಜು ಒಂದರಲ್ಲಿ ಓದುತ್ತಿದ್ದು, ಈ ವರ್ಷ ದ್ವಿತೀಯ ಪಿಯುಸಿ ಉತ್ತೀರ್ಣಳಾಗಿದ್ದಳು.
ವಿನಯಕುಮಾರ್ ಗ್ರಾಮದ ಸಿದ್ದರಾಮೇಶ್ವರ ದೇಗುಲದ ಅರ್ಚಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಕೆಲ ದಿನಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಇತ್ತೀಚಿಗೆ ಇಬ್ಬರ ನಡುವೆ ಬಿರುಕು ಉಂಟಾಗಿತ್ತು. ಇದರಿಂದ ಕೋಪಗೊಂಡಿದ್ದ ವಿನಯಕುಮಾರ್ ಗುರುವಾರ ಮಂಜಾನೆ 5:30ರ ವೇಳೆಗೆ ಯುವತಿಯ ಮನೆಗೆ ತೆರಳಿ ಮಚ್ಚಿನಿಂದ ಆಕೆಯ ಕುತ್ತಿಗೆಗೆ ಬಲವಾಗಿ ಬೀಸಿದ್ದಾನೆ. ಮಾರಣಾಂತಿಕವಾಗಿ ಗಾಯಗೊಂಡಿರುವ ಆಕೆ ಹಾಸನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

Leave a Reply

Your email address will not be published. Required fields are marked *

error: Content is protected !!