March 16, 2026

ಸುರತ್ಕಲ್: ಕೆಎಸ್ಸಾರ್ಟಿಸಿ ಬಸ್, ಖಾಸಗಿ ಬಸ್ ಗಳ ನಡುವೆ ಅಪಘಾತ: 30ಕ್ಕೂ ಅಧಿಕ ಮಂದಿಗೆ ಗಾಯ

0
image_editor_output_image1415638037-1683881198343.jpg

ಸುರತ್ಕಲ್: ಕೆಎಸ್ ಆರ್ ಟಿಸಿ ಬಸ್ ಹಾಗೂ ಖಾಸಗಿ ಬಸ್ ಗಳ ನಡುವೆ ನಡೆದ ಅಪಘಾತದಲ್ಲಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಸುರತ್ಕಲ್ ನ ಮುಕ್ಕದಲ್ಲಿ ನಡೆದಿದೆ.

ಕೆಎಸ್ ಆರ್ ಟಿಸಿ ಬಸ್ ಹಾಗೂ ಖಾಸಗಿ ಬಸ್ ಮಂಗಳೂರು ಕಡೆಗೆ ಸಂಚರಿಸುತ್ತಿದ್ದು, ಮಳೆಯಾಗುತ್ತಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ಎದುರಿನಿಂದ ಹೋಗುತ್ತಿದ್ದ ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಘಟನೆಯಲ್ಲಿ 30 ಮಂದಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!