March 16, 2026

ವಿಟ್ಲ: ಭಾರೀ ಮಳೆ ಗಾಳಿಗೆ ಮರ ಬಿದ್ದು ಮನೆಗೆ ಹಾನಿ: ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭೇಟಿ: ದುರಸ್ತಿ ಕಾರ್ಯಕ್ಕೆ ನೆರವು ನೀಡುವುದಾಗಿ ಘೋಷಣೆ

0
IMG-20230512-WA0015.jpg

ವಿಟ್ಲ: ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ಎಂಬಲ್ಲಿ ಭಾರೀ ಮಳೆಗಾಳಿಗೆ ಮನೆ ಮೇಲೆ ಮರ ಬಿದ್ದು ಹಾನಿಗೊಂಡ ಮನೆಗೆ ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭೇಟಿ ನೀಡಿದರು.

ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ರವಿ ರೋಡ್ರಿಗಸ್ ಅವರ ಮನೆ ಮೇಲೆ ಮರ ಬಿದ್ದ ಭಾಗಃಶ ಹಾನಿಯಾಗಿತ್ತು.‌ ಅಶೋಕ್ ಕುಮಾರ್ ರೈ ಮನೆಗೆ ಭೇಟಿ ನೀಡಿ, ಟ್ರಸ್ಟ್ ಮೂಲಕ ದುರಸ್ತಿ ಕಾರ್ಯಕ್ಕೆ ನೆರವು ನೀಡುವುದಾಗಿ ಘೋಷಿಸಿದರು.

ಈ ಸಂದರ್ಭ ವಿಟ್ಲ ಪಟ್ಟಣ ಪಂಚಾಯಿತಿ ಸದಸ್ಯರಾದ ವಿಕೆಎಂ ಅಶ್ರಪ್, ಹಸೈನಾರ್ ನೆಲ್ಲಿಗುಡ್ಡ, ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ, ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಶೆಟ್ಟಿ ಕೊಲ್ಯ, ಮನೋಹರ ಲ್ಯಾನ್ಸಿ, ಸುಶಾಂತ್ ಶೆಟ್ಟಿ, ಹನೀಫ್ ಗಮಿ, ಜೋಕಿಂ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!