March 16, 2026

ಕಾಸರಗೋಡು: ಆಟೋದಲ್ಲಿ ಎಂಡಿಎಂಎ ಮಾದಕ ವಸ್ತು ಸಾಗಾಟ: ಓರ್ವನನ್ನು ವಶಕ್ಕೆ ಪಡೆದ ಪೊಲೀಸರು

0
IMG-20230512-WA0024.jpg

ಕಾಸರಗೋಡು: ಆಟೋ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ 58 ಗ್ರಾಂ ಎಂಡಿಎಂಎ ಮಾದಕ ವಸ್ತು ಸಹಿತ ಓರ್ವನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕುಂಜತ್ತೂರು ಕೆ.ಜೆ.ಎಂ ರಸ್ತೆಯ ಅಹಮ್ಮದ್ ಸುಹೈಲ್ (37) ಬಂಧಿತ ಆರೋಪಿ.

ರಾಷ್ಟ್ರೀಯ ಹೆದ್ದಾರಿಯ ಕುಂಜತ್ತೂರಿನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಆಟೋ ರಿಕ್ಷಾವನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಮಾದಕ ವಸ್ತು ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!