March 16, 2026

ಉಳ್ಳಾಲ: ಯುವಕ ಮತ್ತು ಯುವತಿ ಆತ್ಮಹತ್ಯೆ ಯತ್ನ ಪ್ರಕರಣ: ಬಂಟ್ವಾಳದ ಯುವಕ ಮತ್ತು ಕಂಕನಾಡಿಯ ಯುವತಿ ಮೃತ್ಯು

0
dead-4-1.jpg

ಉಳ್ಳಾಲ: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಹಾಗೂ ಯುವತಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ಮೂಲದ ನಿಯಾನ್ (19) ಮತ್ತು ಕಂಕನಾಡಿ ನಿವಾಸಿ ಸಫ್ರೀನಾ(22) ಮೃತಪಟ್ಟವರು.

ಮೇ.7 ರಂದು ಪಂಪ್ ವೆಲ್ ಸಮೀಪ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಇಬ್ಬರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸಫ್ರೀನಾ ಆಸ್ಪತ್ರೆಯಲ್ಲಿ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರೆ, ನಿಯಾನ್ ಸಂಜೆ ವೇಳೆ ಮೃತಪಟ್ಟಿದ್ದಾನೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!