September 20, 2024

ಮಂಗಳೂರು:ಮತ ಎಣಿಕೆ ಆರಂಭ: ಕೆಲವು ಹೊತ್ತಿನಲ್ಲಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

0

ಮಂಗಳೂರು: ಮೇ10 ರಂದು ನಡೆದಿದ್ದ ವಿಧಾನಸಭೆ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು, 2615 ಅಭ್ಯರ್ಥಿಗಳ ಹಣೆಬರಹ ಕೆಲಹೊತ್ತಿನಲ್ಲೇ ಪ್ರಕಟವಾಗಲಿದೆ. ಸ್ಟ್ರಾಂಗ್‌ ರೂಂ ತೆರೆಯಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಮತಗಳ ಎಣಿಕೆ ಪ್ರಕ್ರಿಯೆಗೆ ಚಾಲನೆ ದೊರೆಯಲಿದ್ದು, ಮೊದಲಿಗೆ ಅಂಚೆ ಮತಗಳ ಎಣಿಕೆ ಶುರುವಾಗಲಿದೆ.

5,30,85,566 ಮತದಾರರ ಪೈಕಿ 3,88,51,807 ಜನರಿಂದ ಮತದಾನ. 26682156 ಪುರುಷರ ಪೈಕಿ 19658398 ಪುರುಷರಿಂದ ಹಕ್ಕು ಚಲಾವಣೆ ಮಾಡಲಿದ್ದಾರೆ.

ಇನ್ನು 26398483 ಮಹಿಳಾ ಮತದಾರರ ಪೈಕಿ 19192372 ಸ್ತ್ರೀಯರಿಂದ ಮತದಾನವಾಗಿದ್ದು, 4927 ಮಂಗಳಮುಖಿಯರ ಪೈಕಿ 1037 ಮಂಗಳಮುಖಿಯರಿಂದ ಮತ ಚಲಾಯಿಸಿದ್ದಾರೆ. ರಾಜ್ಯದಲ್ಲಿ ಈ ಬಾರಿ ದಾಖಲೆ ಪ್ರಮಾಣದಲ್ಲಿ ಶೇ. 73.19ರಷ್ಟು ಮತಚಲಾವಣೆಯಾಗಿದೆ.

ಎಣಿಕಾ ಕೇಂದ್ರದಲ್ಲಿ 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯನ್ನ ನಿಯೋಜಿಸಲಾಗಿದೆ. ಹಾಗಾಗಿ ಮತ ಎಣಿಕೆ ಕೇಂದ್ರಗಳ ಬಳಿ 5ಕ್ಕಿಂತಲೂ ಹೆಚ್ಚು ಜನ ಗುಂಪು ಸೇರುವಂತಿಲ್ಲ.

ಮೆರವಣಿಗೆ, ಸಮಾರಂಭ, ವಿಜಯೋತ್ಸವ, ಸಮಾವೇಶ ನಡೆಸುವಂತಿಲ್ಲ. ನಿನ್ನೆ ರಾತ್ರಿ 10ರಿಂದಲೇ ಇಂದು ಮಧ್ಯರಾತ್ರಿ 12ಗಂಟೆ ವರೆಗೂ ರಾಜ್ಯಾದ್ಯಂತ ಮದ್ಯ ಮಾರಾಟ ನಿರ್ಬಂಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!