ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಗೆ ಸೋಲು, ಲಕ್ಷ್ಮಣ ಸವದಿ ಭಾರೀ ಅಂತರದಲ್ಲಿ ಗೆಲುವು
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಲಿಂಗಾಯತ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಸವದಿ ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ ಜಗದೀಶ್ ಶೆಟ್ಟರ್ ಸೋಲಿನತ್ತ ಮುಖ ಮಾಡಿದ್ದಾರೆ.
ಅಥಣಿ ವಿಧಾಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯಥಿಯಾಗಿದ್ದ ಲಕ್ಷ್ಮಣ ಸಂಗಪ್ ಸವದಿ ಅವರು ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ವಿರುದ್ಧ ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ಬಿಜೆಪಿ ನಾಯಕ ಮಹೇಶ್ ಈರನಗೌಡ ಕುಮಟಳ್ಳಿ ಶಾಸಕರಾಗಿದ್ದಾರೆ. 2018 ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಗೆದ್ದ ನಂತರ ಬಿಜೆಪಿಗೆ ಹಾರಿದ್ದ ಕಮಟಳ್ಳಿ 2019 ರ ಉಪಚುನಾವಣೆಯಲ್ಲಿಯೂ ಗೆದ್ದು ಬೀಗಿದ್ದರು. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹಾಗೂ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ನಡುವೆ




