ದ್ವೇಷ ಬೂಟಾಟಿಕೆಯನ್ನು ಓದ್ದೋಡಿಸಿದ ಸ್ವಾಭಿಮಾನಿ ಕನ್ನಡಿಗರಿಗೆ ಧನ್ಯವಾದಗಳು: ಪ್ರಕಾಶ್ ರಾಜ್ ಟ್ವೀಟ್
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 135 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ ಕಾಂಗ್ರೆಸ್‌ಗೆ ಅನೇಕರು ಅಭಿನಂದನೆ ಸಲ್ಲಿಸುತ್ತಿದ್ದಾರೆ. ನಟ ಪ್ರಕಾಶ್ ರಾಜ್ ಅವರು ಕೂಡ ಟ್ವಿಟರ್ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.
ಮೊದಲಿನಿಂದಲೂ ಬಿಜೆಪಿ ನಿಲುವುಗಳನ್ನು ವಿರೋಧಿಸಿಕೊಂಡು ಬಂದಿರುವ ಪ್ರಕಾಶ್ ರೈ ಅವರಿಗೆ ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಖುಷಿ ನೀಡಿದೆ. ಅವರ ಟ್ವೀಟ್ ವೈರಲ್ ಆಗಿದ್ದು, ಅನೇಕರು ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಪ್ರಕಾಶ್ ರಾಜ್ ಅವರ ಮಾತುಗಳಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್, ಅಮಿತ್ ಶಾ ಅವರನ್ನು ವ್ಯಂಗ್ಯಮಾಡುವ ರೀತಿಯ ಫೋಟೋ ಹಂಚಿಕೊಂಡಿದ್ದು, ‘Thank you Karnataka for Kicking OUT Hatred and Bigotry ..The Emperor is NAKED … ದ್ವೇಶ…ಬೂಟಾಟಿಕೆಯನ್ನು …ಓದ್ದೋಡಿಸಿದ ಸ್ವಾಭಿಮಾನಿ ಕನ್ನಡಿಗರಿಗೆ ದನ್ಯವಾದಗಳು …..ಬೆತ್ತಲೆಯಾದ ಚಕ್ರವರ್ತಿ#justasking’ ಪ್ರಕಾಶ್ ರಾಜ್ ಅವರು ಟ್ವೀಟ್ ಮಾಡಿದ್ದಾರೆ. ಈ ಬರಹದೊಂದಿಗೆ ಅವರು ಎಂದಿನಂತೆ ಜಸ್ಟ್ ಆಸ್ಕಿಂಗ್ ಎಂಬ ಹ್ಯಾಷ್ಟ್ಯಾಗ್ ಬಳಸಿದ್ದಾರೆ.




