March 24, 2026

ವಿಧಾನಸಭೆಗೆ ಆಯ್ಕೆಗೊಂಡ 224 ಸದಸ್ಯರ ಪಟ್ಟಿಯನ್ನು ರಾಜ್ಯಪಾಲರಿಗೆ ಸಲ್ಲಿಸಿದ ಚುನಾವಣಾ ಆಯೋಗ

0
n4996117321684074978579935b44ec519e57cf2bda98072b3094c16df8fe8af4a528fcb7544fd8d19f09bb.jpg

ಬೆಂಗಳೂರು: ನಿನ್ನೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳಲ್ಲಿ ಚುನಾಯಿತರಾದ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗದಿಂದ ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ.

ಕರ್ನಾಟಕ ಸಾರ್ವತ್ರಿಕ ವಿಧಾನಸಭೆ ಚುನಾವಣೆ – 2023 ರಲ್ಲಿ ಕರ್ನಾಟಕ ವಿಧಾನಸಭೆಗೆ ಆಯ್ಕೆಗೊಂಡ 224 ವಿಧಾನಸಭಾ ಸದಸ್ಯರುಗಳ ಅಧಿಸೂಚಿತ ಪಟ್ಟಿಯನ್ನು ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಭಾರತ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರಾದ ಅಜಯ್ ಬಾಡೂ, ಆಯೋಗದ ಪ್ರಧಾನ ಕಾರ್ಯದರ್ಶಿ ಯಾದ ನರೇಂದ್ರ ಎನ್ ಬುಟೋಲಿಯ ಹಾಗೂ ಕಾರ್ಯದರ್ಶಿ ಬಿ.ಸಿ.ಪಾತ್ರ ಮತ್ತು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಇಂದು ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಪರ ಮುಖ್ಯ ಚುನಾವಣಾಧಿಕಾರಿಗಳಾದ ರಾಜೇಂದ್ರ ಚೋಳನ್ ಹಾಗೂ ವೆಂಕಟೇಶ್ ಕುಮಾರ್ ಅವರು ಸಹ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!