August 15, 2026

ಜನರು ನನಗೆ ಅತ್ಯುತ್ತಮ ಹುಟ್ಟುಹಬ್ಬದ ಉಡುಗೊರೆಯನ್ನು ನೀಡಿದ್ದಾರೆ: ಡಿ.ಕೆ ಶಿವಕುಮಾರ್

0
FwG5_9maEAAzPUJ.jpg

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 132 ಸ್ಥಾನಗಳೊಂದಿಗೆ ಸ್ಪಷ್ಟ ಬಹುಮತ ಪಡೆದು ಅಧಿಕಾರ ಚುಕ್ಕಾಣಿ ಹಿಡಿದಿದೆ. ಈ ನಡುವೆ ಇಂದೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹುಟ್ಟುಹಬ್ಬವಾಗಿದ್ದು, ಈ ಕುರಿತಾಗಿ ಟ್ವೀಟ್ ಮಾಡಿದ್ದಾರೆ.

ಇಂದು ಡಿಕೆ ಶಿವಕುಮಾರ್ ತಮ್ಮ 61ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೇಕ್ ತಿನ್ನಿಸಿ, ಶುಭಾಶಯ ತಿಳಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮಾಜಿ ಸಚಿವ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಮತ್ತಿತರರು ಜತೆಗಿದ್ದರು.

ಪೂರ್ಣ ಬಹುಮತದೊಂದಿಗೆ ಗೆದ್ದಿರುವ ಕಾಂಗ್ರೆಸ್‌ಗೆ ಈಗ ಮುಖ್ಯಮಂತ್ರಿ ಆಯ್ಕೆ ವಿಚಾರವೇ ಕಗ್ಗಂಟಾಗಿ ಪರಿಣಮಿಸಿದ್ದು, ಇಂದು ಶಾಸಕಾಂಗ ಪಕ್ಷದ ಸಭೆಯಲ್ಲೂ ಆ ಕುರಿತು ಒಮ್ಮತದ ನಿರ್ಣಯಕ್ಕೆ ಬರಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಶಾಸಕರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ.

ಡಿಕೆ ಶಿವಕುಮಾರ್ ತಮ್ಮ ಟ್ವೀಟ್ನಲ್ಲಿ ‘ನನ್ನ ಜೀವನ ಕರ್ನಾಟಕದ ಜನರ ಸೇವೆಗೆ ಮುಡಿಪಾಗಿದೆ. ನನ್ನ ಹುಟ್ಟುಹಬ್ಬದ ಹಿಂದಿನ ದಿನದಂದು ಕರ್ನಾಟಕದ ಜನರು ನನಗೆ ಅತ್ಯುತ್ತಮ ಹುಟ್ಟುಹಬ್ಬದ ಉಡುಗೊರೆಯನ್ನು ನೀಡಿದ್ದಾರೆ. ನನ್ನ ಕಾಂಗ್ರೆಸ್ ಕುಟುಂಬಕ್ಕೆ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!