August 15, 2026

ಬಿಜೆಪಿಯ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ತ‌ಂಡದಿಂದ ಹಲ್ಲೆ

0
n4997297461684121433818944c061078d8f49a6bc050fa626ccd315bb0fdd7911ca6d3b838df038b601a70.jpg

ಬೆಳ್ತಂಗಡಿ: ಬಿಜೆಪಿಯ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ತ‌ಂಡ ಹಲ್ಲೆ ನಡೆಸಿದ ಘಟನೆ ಪೆರಾಡಿಯಲ್ಲಿ ರವಿವಾರ ರಾತ್ರಿ ನಡೆದಿದೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿ ಎಂದು ಗುರುತಿಸಲಾಗಿದ್ದು, ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಸ್ಪತ್ರೆಯ ಎದುರು ಜಮಾಯಿಸಿದ್ದರು. ಘಟನೆಯ ಬಗ್ಗೆ ವೇಣೂರು ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

ಆಸ್ಪತ್ರೆಗೆ ಆಗಮಿಸಿದ ಕಾಂಗ್ರೆಸ್ ಮುಖಂಡರಾದ ಮಾಜಿ ಶಾಸಕ ವಸಂತ ಬಂಗೇರ, ರಕ್ಷಿತ್ ಶಿವರಾಂ ಸೇರಿದಂತೆ ಹಲವರು ಹಲ್ಲೆಗೊಳಗಾದ ದಯಾನಂದ ಪೂಜಾರಿಗೆ ಧೈರ್ಯ ತುಂಬಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!