March 24, 2026

ಶಿವಮೊಗ್ಗ: ಹಣಕ್ಕಾಗಿ ಯುವತಿಯ ಅಪಹರಣ

0
image_editor_output_image-916641754-1684141338498.jpg

ಶಿವಮೊಗ್ಗ: ಹಣಕ್ಕಾಗಿ ಯುವತಿಯೊಬ್ಬಳನ್ನು ಅಪಹರಣ ಮಾಡಿರುವ ಘಟನೆ ಇಲ್ಲಿನ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ

ರಂಜಿತಾ (22) ಎಂಬ ಯುವತಿಯು ಮೇ 14 ರಂದು ಸಂಜೆ 5 ಗಂಟೆಯಿಂದ ರಾತ್ರಿ 9.30ರ ಅವಧಿಯಲ್ಲಿ ಹಣಕ್ಕಾಗಿ ದುಷ್ಕರ್ಮಿಗಳು ಅಪಹರಣ ಮಾಡಿದ್ದಾರೆ.

ಯುವತಿಯು ಸುಮಾರು 5.1 ಅಡಿ ಎತ್ತರ, ಬಿಳಿ ಮೈಬಣ್ಣ, ತೆಳ್ಳನೆಯ ಮೈಕಟ್ಟು ಹೊಂದಿದ್ದು, ಕಾಣೆಯಾದ ವೇಳೆ ನೇವಿ ಬ್ಲೂ ಬಣ್ಣದ ಚೂಡಿದಾರ್ ಧರಿಸಿರುತ್ತಾರೆ. ಇವರ ಸುಳಿವು ಯಾರಿಗಾದರೂ ಸಿಕ್ಕಲ್ಲಿ ಜಯನಗರ ಪೊಲೀಸ್ ಠಾಣೆ ಶಿವಮೊಗ್ಗ, ಜಿಲ್ಲಾ ನಿಸ್ತಂತು ಕೇಂದ್ರ ಅಥವಾ ಪೊಲೀಸ್ ಕಂಟ್ರೋಲ್ ರೂಂ ದೂ.ಸಂ: 08182-261400, 261413, 261416ನ್ನು ಸಂಪರ್ಕಿಸಬಹುದೆಂದು ಜಯನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!