March 16, 2026

ಪುತ್ತೂರು: ಬಿಜೆಪಿ ನಾಯಕರ ಫೋಟೋಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ, ಚಪ್ಪಲಿ ಹಾರ ಹಾಕಿ ಬ್ಯಾನರ್ ಅಳವಡಿಕೆ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

0
IMG-20230515-WA0050.jpg

ಪುತ್ತೂರು : ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡರ ವಿರುದ್ಧ ಅವಹೇಳನಕಾರಿ ಬರಹದೊಂದಿಗೆ ಭಾವಚಿತ್ರ ಲಗತ್ತಿಸಿ ಬ್ಯಾನರ್‌ ಅಳವಡಿಸಿದ ಪುತ್ತೂರು ಬಸ್ಸು ನಿಲ್ದಾಣದ ಬಳಿ ಪ್ರಕರಣದಲ್ಲಿ ಇಬ್ಬರನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನರಿಮೊಗರು ಗ್ರಾಮದ ಸಹೋದರರಾದ ವಿಶ್ವನಾಥ್‌ ಹಾಗೂ ಮಾಧವ ಪೊಲೀಸ್‌ ವಶದಲ್ಲಿರುವವರು. ಪುತ್ತೂರು ಕೆ.ಎಸ್ಆರ್.ಟಿಸಿ ಬಸ್ಸು ನಿಲ್ದಾಣದ ಎದುರು ಅರಣ್ಯ ಇಲಾಖೆಯ ಆವರಣ ಗೋಡೆ ಬಳಿ ಅವಹೇಳನಕಾರಿ ಬ್ಯಾನರ್ ಅಳವಡಿಸಲಾಗಿತ್ತು.

ಪುತ್ತೂರು ನಗರಸಭಾ ಆಯುಕ್ತ ಮಧು ಎಸ್‌ ಮನೋಹರ್‌ ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅದರಲ್ಲಿ “ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರಧ್ಧಾಂಜಲಿ” ಎಂದು ನಳಿನ್‌ ಕುಮಾರ್‌ ಕಟೀಲು ಹಾಗೂ ಡಿ.ವಿ ಸದಾನಂದ ಗೌಡ ಎಂದು ಬರೆಯಲಾಗಿತ್ತು. ಆ ಬ್ಯಾನರ್‌ ಗೆ ಚಪ್ಪಲಿ ಹಾರವನ್ನು ಹಾಕಿರುವ ಬಗ್ಗೆಯೂ ಸಾಮಾಜಿಕ ಜಾಲತಾಣದಲ್ಲಿ ದೂರು ನೀಡಲಾಗಿತ್ತು.

Leave a Reply

Your email address will not be published. Required fields are marked *

error: Content is protected !!