ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶಪ್ಪ ಮನೆಯಲ್ಲಿ 9 ಕೆ.ಜಿ. ಚಿನ್ನ, ₹15 ಲಕ್ಷ ನಗದು ಪತ್ತೆ
ಗದಗ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಹಿನ್ನಲೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್. ಅವರ ಮನೆ ಮೇಲೆ ಬುಧವಾರ ಬೆಳಿಗ್ಗೆ ಎಸಿಬಿ ದಾಳಿ ನಡೆದಿದೆ.
ಗದಗ ಜಿಲ್ಲೆಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶಪ್ಪ ಮನೆಯಲ್ಲಿ 9 ಕೆ.ಜಿ. ಚಿನ್ನ ಮತ್ತು ₹15 ಲಕ್ಷ ನಗದು ಪತ್ತೆಯಾಗಿದೆ
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನಲ್ಲಿರುವ ತೋಟದ ಮನೆ, ಶಿವಮೊಗ್ಗದ ಚಾಲುಕ್ಯ ನಗರದಲ್ಲಿನ ಮನೆ ಹಾಗೂ ಗದಗ ನಗರದಲ್ಲಿ ಅವರು ವಾಸವಿದ್ದ ಬಾಡಿಗೆ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ. ಎಸಿಬಿ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದು, ಆಸ್ತಿ, ಚಿನ್ನಾಭರಣ, ನಗದು ವಶಪಡಿಸಿಕೊಂಡ ವಿವರ ಲಭ್ಯವಾಗಿಲ್ಲ.





