March 16, 2026

ಮಲಗಿದ್ದಾಗ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿ ಭೀಕರ ಹತ್ಯೆ

0
image_editor_output_image1210746948-1684300915088.jpg

ಬೀದರ್: ಮಲಗಿದ್ದಾಗ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ಬೀದರ್ ನಲ್ಲಿ ನಡೆದಿದೆ.

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಯದಲಾಪೂರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಂಕುಶರೆಡ್ಡಿ ಬಾಬುರೆಡ್ಡಿ ಟೋಣ್ಣೆನವರ್ (35) ಕೊಲೆಯಾದ ವ್ಯಕ್ತಿ.

ಜಮೀನಿನಲ್ಲಿ ಮರದ ಕೆಳಗೆ ಮಲಗಿದ್ದಾಗ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ. ಹಣಕಾಸಿನ ವಿಷಯಕ್ಕಾಗಿ ಕೊಲೆ ನಡೆದಿದೆ ಎನ್ನಲಾಗುತ್ತಿದೆ. ಕೊಲೆಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಸುದ್ದಿ ತಿಳಿದ ಹುಮ್ನಾಬಾದ್ ಎಎಸ್ಪಿ ಶಿವಾಂಸು ರಾಜಪುತ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಸವಕಲ್ಯಾಣ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!