March 16, 2026

ಕರ್ನಾಟಕದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಆಯ್ಕೆ: ಕಂಠೀರವ ಸ್ಟೇಡಿಯಂನಲ್ಲಿ ಶನಿವಾರ ಪ್ರಮಾಣವಚನ

0
image_editor_output_image-2091950339-1684311924120.jpg

ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಕರ್ನಾಟಕದ ನೂತನ ಸಿಎಂ ಆಯ್ಕೆಯ ಕಸರತ್ತು ಅಂತಿಮ ಹಂತಕ್ಕೆ ಬಂದಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಕರ್ನಾಟಕದ ನೂತನ ಸಿಎಂ ಆಗಿ ಆಯ್ಕೆ ಆಗಿದ್ದಾರೆ. ಡಿ.ಕೆ ಶಿವಕುಮಾರ್ ಡಿಸಿಎಂ ಆಗಿ ಆಯ್ಕೆಗೊಂಡಿದ್ದಾರೆ.

ಸಿದ್ದರಾಮಯ್ಯನವರ ಪ್ರಮಾಣ ವಚನ ಕಾರ್ಯಕ್ರಮ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆಸಲು ಕಾಂಗ್ರೆಸ್‌ ಹೈಕಮಾಂಡ್‌ ಮುಂದಾಗಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ ಮತ್ತು ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಿಗದಿಯಾದ ಬೆನ್ನಲ್ಲೇ ಅಧಿಕಾರಿಗಳು ಸಿದ್ಧತೆಗಾಗಿ ಕಂಠೀರವ ಸ್ಟೇಡಿಯಂಗೆ ಆಗಮಿಸಿದ್ದಾರೆ. ಸುಮಾರು 1 ಲಕ್ಷಕ್ಕೂ ಅಧಿಕ ಕಾರ್ಯಕರ್ತರು, ಅಭಿಮಾನಿಗಳ ಮುಂದೆ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಮತ್ತು ಕಾಂಗ್ರೆಸ್‌ನ ಬೆಂಬಲಿತ ಬೇರೆ ರಾಜ್ಯದ ಮುಖ್ಯಮಂತ್ರಿಗಳು ಆಗಮಿಸುವ ಸಾಧ್ಯತೆಯಿದೆ.

2013 ರಲ್ಲೂ ಸಿದ್ದರಾಮಯ್ಯ ಕಂಠೀರವ ಸ್ಟೇಡಿಯಂನಲ್ಲೇ ಪ್ರಮಾಣವಚನ ಸ್ವೀಕರಿಸಿ 5 ವರ್ಷ ಅಧಿಕಾರ ನಡೆಸಿದ್ದರು. ಈ ಕಾರಣಕ್ಕೆ ಎರಡನೇ ಬಾರಿ ಸಿದ್ದರಾಮಯ್ಯ ಕಂಠೀರವ ಸ್ಟೇಡಿಯಂನಲ್ಲೇ ಪ್ರಮಾಣ ವಚನ ನಡೆಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!