August 12, 2026

ಕರ್ನಾಟಕದ ನೂತನ ಸಿಎಂ ಆಯ್ಕೆ ಇನ್ನೂ ಅಂತಿಮ ನಿರ್ಧಾರವಾಗಲಿಲ್ಲ: ರಣದೀಪ್ ಸುರ್ಜೆವಾಲ

0
PTI05_26_2022_000110A_1200x768.jpeg

ನವದೆಹಲಿ: ಕರ್ನಾಟಕದ ನೂತನ ಸಿಎಂ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ರಣದೀಪ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದು, ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮವಾಗಿಲ್ಲ ಎಂದು ತಿಳಿಸಿದ್ದಾರೆ.

ಖರ್ಗೆ ನಿವಾಸದ ಬಳಿ ಹೇಳಿಕೆ ನೀಡಿದ, ಅವಿರೋಧವಾಗಿ ಸಿಎಲ್ ಪಿ ನಾಯಕನ ಆಯ್ಕೆಗೆ ಯತ್ನಿಸುತ್ತಿದ್ದೇವೆ. ಯಾವುದೇ ಊಹಾಪೋಹಗಳಿಗೆ ಕಿವಿಕೊಡಬೇಡಿ, 48ರಿಂದ 78 ಗಂಟೆಗಳೊಳಗೆ ಹೊಸ ಸಚಿವ ಸಂಪುಟ ರಚಿಸುವುದಾಗಿ ಅವರು ತಿಳಿಸಿದರು.

ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರು ಕೂಡ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇನ್ನು ಕೂಡ ಚರ್ಚೆ ನಡೆಸುತ್ತಿದ್ದೇವೆ. ಸುಳ್ಳು ಸುದ್ದಿಗಳಿಂದ ದೂರವಿರಿ, ಯಾವುದೇ ಊಹಾಪೋಹಗಳಿಗೆ ಕಿವಿಕೊಡಬೇಡಿ ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *

You may have missed

error: Content is protected !!