August 18, 2026

ಮಂಗಳೂರು : ಖಾಸಗಿ ಬಸ್ ಗೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ: ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರು

0
IMG-20230517-WA0013.jpg

ಮಂಗಳೂರು : ಖಾಸಗಿ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕಟೀಲು ದೇವಸ್ಥಾನದ ಮುಂಭಾಗದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಇಂದು ಮಧ್ಯಾಹ್ನ ಗೋಲ್ಡನ್ ಟ್ರಾವೆಲ್ಸ್ ಎಂಬ ಹೆಸರಿನ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ದೇವಸ್ಥಾನದ ಮುಂಭಾಗವೇ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ಬಸ್ ನಲ್ಲಿ ಇಬ್ಬರು ಮಹಿಳೆಯರು ಮತ್ತು ಬಸ್ ಚಾಲಕ ಇದ್ದರು ಎಂದು ಹೇಳಲಾಗಿದ್ದು, ಮೂವರು ಬಸ್ ನಿಂದ ಇಳಿದ ಕಾರಣ ಅಪಾಯದಿಂದ ಪಾರಾಗಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಈ ವೇಳೆ ಸ್ಥಳದಲ್ಲಿ ನೀರು ಸರಬರಾಜು ಮಾಡುವ ಟ್ಯಾಂಕರ್ ಇದ್ದ ಕಾರಣ ಕೂಡಲೇ ಬೆಂಕಿಯನ್ನು ನಂದಿಸಲಾಗಿದೆ. ಕೂಡಲೇ ಬೆಂಕಿ ನಂದಿಸಿದ್ದರಿಂದ ಅನಾಹುತ ತಪ್ಪಿದೆ.

Leave a Reply

Your email address will not be published. Required fields are marked *

error: Content is protected !!