March 16, 2026

ಪುತ್ತೂರು : ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣ: ಒಂಭತ್ತು ಮಂದಿಗೆ ಥಳಿಸಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆಂಬ ಆರೋಪ: ಪೊಲೀಸರು ಕಾನೂನು ಮೀರಿ ವರ್ತಿಸಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದ ಶಾಸಕ ಅಶೋಕ್ ಕುಮಾರ್ ರೈ

0
16_mn-Ashok-Kumar-Rai.jpg

ಪುತ್ತೂರು : ಸರ್ಕಾರಿ ಬಸ್ ನಿಲ್ದಾಣದ ಮುಂಭಾಗ ಬಿಜೆಪಿ ನಾಯಕರ ಫೋಟೋವಿದ್ದ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಒಂಭತ್ತು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು ಅವರಿಗೆ ಥಳಿಸಿ ದೌರ್ಜನ್ಯ ಎಸಗಿದ್ದಾರೆಂಬ ಆರೋಪ ಕೇಳಿ ಬರುತ್ತಿದ್ದು, ಪ್ರಕರಣದಲ್ಲಿ ಪೊಲೀಸರು ಕಾನೂನು ಮೀರಿ ವರ್ತಿಸಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯದ ಬಗೆಗಿನ ಪೋಟೋ, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ.
ಘಟನೆಯ ಸತ್ಯಾಂಶದ ಬಗ್ಗೆ ಸಂಬಂಧಪಟ್ಟವರ ಜೊತೆ ಮಾಹಿತಿ ಪಡೆದುಕೊಳ್ಳುವೆ. ಪ್ರಕರಣದಲ್ಲಿ ಪೊಲೀಸರು ಕಾನೂನು ಮೀರಿ ವರ್ತನೆ ತೋರಿದ್ದು ಕಂಡು ಬಂದಲ್ಲಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!