March 16, 2026

ಸಿದ್ದರಾಮಯ್ಯ ಮುಂದಿನ ಸಿಎಂ ಘೋಷಣೆ: ಇಬ್ಬರು ಕಾಂಗ್ರೆಸ್‌ ನಾಯಕರಿಗೆ ನೋಟಿಸ್‌

0
image_editor_output_image-775255259-1684353907577.jpg

ನವದೆಹಲಿ: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್‌ ಮಟ್ಟದಲ್ಲಿ ಇನ್ನೂ ತೀವ್ರ ಚರ್ಚೆ ನಡೆಯುತ್ತಿರುವ ಮಧ್ಯೆಯೇ ಸಿದ್ದರಾಮಯ್ಯ ಅವರನ್ನು ಸಿಎಂ ಎಂದು ಹೈಕಮಾಂಡ್‌ ಘೋಷಣೆ ಮಾಡಿದೆ ಎಂಬ ಸುಳ್ಳು ಸುದ್ದಿ ಹರಿಬಿಟ್ಟ ಇಬ್ಬರು ಕಾಂಗ್ರೆಸ್‌ ನಾಯಕರಿಗೆ ನೋಟಿಸ್‌ ನೀಡಲಾಗಿದೆ.

ರಾಮದುರ್ಗ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಅಶೋಕ್‌ ಎಂ. ಪಟ್ಟಣ್‌, ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ಅವರಿಗೆ ನೋಟಿಸ್‌ ನೀಡುವಂತೆ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಸೂಚನೆ ನೀಡಿದ್ದಾರೆ.

ಕರ್ನಾಟಕ ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ. 48ರಿಂದ 72 ಗಂಟೆಯೊಳಗೆ ಅಧಿಕೃತ ಘೋಷಣೆ ಹೊರಡಿಸುತ್ತೇವೆ ಎಂದು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!