July 3, 2026

ಪುತ್ತೂರು: ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ಪ್ರಕರಣ:
ಪುತ್ತೂರು ಗ್ರಾಮಾಂತರ ಪಿಎಸ್ಐ ಮತ್ತು ಪಿಸಿ ಅಮಾನತು

0
image_editor_output_image-600345897-1684319737260

ಪುತ್ತೂರು: ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಪುತ್ತೂರು ನಗರ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದ ಆರೋಪಿತರಿಗೆ ಪೊಲೀಸರು ಹಲ್ಲೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಪುತ್ತೂರು ಡಿಎಸ್ಪಿ, ಪುತ್ತೂರು ಗ್ರಾಮಾಂತರ ಠಾಣಾ ಪಿ.ಎಸ್.ಐ , ಪುತ್ತೂರು ಗ್ರಾಮಾಂತರ ಠಾಣಾ ಪಿಸಿ ಹರ್ಷಿತ್ ರವರ ವಿರುದ್ಧ ಪುತ್ತೂರು ನಗರ ಠಾಣೆ Cr no.39/23, u/s 323, 324,506 r/w 34 ಐಪಿಸಿ ರಂತೆ ಪ್ರಕರಣ ದಾಖಲಾಗಿದೆ.

ಪ್ರಕರಣದ ತನಿಖೆಯನ್ನು ಬಂಟ್ವಾಳ ಡಿಎಸ್ಪಿ ರವರಿಗೆ ವಹಿಸಲಾಗಿದೆ. ಹೆಚ್ಚುವರಿ ಪೊಲೀಸ್ ಅಧೀಕ್ಷಕರ ವಿಚಾರಣೆ ವರದಿ ಆಧಾರದ ಮೇಲೆ ಪುತ್ತೂರು ಗ್ರಾಮಾಂತರ ಠಾಣಾ ಪಿ.ಎಸ್.ಐ, ಪುತ್ತೂರು ಗ್ರಾಮಾಂತರ ಠಾಣಾ ಪಿಸಿ ಹರ್ಷಿತ್ ರನ್ನು ಸೇವೆಯಿಂದ ಅಮಾನತು ಗೊಳಿಸಲಾಗಿದೆ ಹಾಗೂ ಪುತ್ತೂರು ಡಿಎಸ್ಪಿ ರವರ ವಿರುದ್ಧ ಸೂಕ್ತ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲು ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!