March 16, 2026

ಗೃಹ ರಕ್ಷಕ ದಳದ ಸಿಬ್ಬಂದಿಯ ಕತ್ತು ಕೊಯ್ದು ಕೊಲೆ

0
image_editor_output_image-1979600638-1684395458446.jpg

ಬೀದರ್: ಕೌಟುಂಬಿಕ ಕಲಹ ಹಿನ್ನೆಲೆ ಪತಿಯ ಅಣ್ಣ ಮಹಿಳೆಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ತ್ರೀಪುರಾಂತನಲ್ಲಿ ನಡೆದಿದೆ.

ಸಂಗೀತ ಶ್ರೀಧರ ಕಾಂಗೆ (35) ಕೊಲೆಯಾದ ಮಹಿಳೆ. ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾಗಿದೆ.

ಗಲಾಟೆಯಲ್ಲಿ ಹರಿತವಾದ ಆಯುಧದಿಂದ ಮಹಿಳೆಯ ಕೊಲೆ ಮಾಡಿದ್ದು, ಹತ್ಯೆಯಾದ ಮಹಿಳೆ ಗೃಹ ರಕ್ಷಕ ದಳದ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಳು.
ಮಹಿಳೆಯ ಹತ್ಯೆಗೈದ ಆರೋಪಿ ಬಸವಕಲ್ಯಾಣ ನಗರಸಭೆಯಲ್ಲಿ ಪೌರ ಕಾರ್ಮಿಕನಾಗಿ ಸೇವೆ ಸಲ್ಲಿಸುತ್ತಿದ್ದು, ಮನೆಯಲ್ಲಿ ಯಾರು ಇಲ್ಲದಿದ್ದಾಗ ಮಹಿಳೆಯೊಂದಿಗೆ ಜಗಳವಾಡಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಈ ಕುರಿತು ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!