March 16, 2026

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಉಪಮುಖ್ಯಮಂತ್ರಿ: ಅಧಿಕೃತ ಘೋಷಣೆ

0
image_editor_output_image-584763268-1684399306385.jpg

ನವದೆಹಲಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ , ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ . ಈ ವಿಚಾರವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಈ ಬಗ್ಗೆ ನವದೆಹಲಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಮೇ 20ರಂದು ಸಿದ್ದರಾಮಯ್ಯ, ಡಿಕೆಶಿ ಪ್ರಮಾಣವಚನ ಸ್ವೀಕರಿಸುತ್ತಾರೆ.ಮಧ್ಯಾಹ್ನ ಪದಗ್ರಹಣ ಸಮಾರಂಭ ನಡೆಯಲಿದೆ ಎಂದರು.

ಕರ್ನಾಟಕದ ಗೆಲುವಿನ ಶ್ರೇಯಸ್ಸು ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಸೇರಿ ಎಲ್ಲ ಹಿರಿಯ ನಾಯಕರಿಗೂ ಸಲ್ಲುತ್ತದೆ. ಭಾರತ್ ಜೋಡೋ ಪಾದಯಾತ್ರೆ ಬಳಿಕ ಕಾಂಗ್ರೆಸ್ ಗೆದ್ದಿದೆ. ಕರ್ನಾಟಕದಲ್ಲಿ ಅನುಭವಿ, ಸಮರ್ಥ ಕಾಂಗ್ರೆಸ್ ನಾಯಕರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷವನ್ನು ಸಂಘಟಿಸಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇಬ್ಬರೂ ಸಮರ್ಥ ನಾಯಕರು ಎಂದರು.

Leave a Reply

Your email address will not be published. Required fields are marked *

error: Content is protected !!