July 3, 2026

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆ

0
20230518_152913.jpg

ಬಂಟ್ವಾಳ: ಪಾಣೆಮಂಗಳೂರು ಸೇತುವೆಯ ಮೇಲಿನಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ನೆಟ್ಲ ನಿವಾಸಿ ಪ್ರವೀಣ್ ಕುಲಾಲ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಪ್ರವೀಣ್ ಮಾನಸಿಕ ರೋಗದಿಂದ ಬಳಲುತ್ತಿದ್ದು, ಆತ್ಮಹತ್ಯೆಗೆ ಇದೇ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಬೈಕ್ ರಿಪೇರಿ ಕೆಲಸ ಮಾಡುತ್ತಿದ್ದ ಈತ ಎರಡು ದಿನಗಳಿಂದ ಮಾನಸಿಕವಾಗಿ ನೊಂದುಕೊಂಡು ತಿರುಗಾಡುತ್ತಿದ್ದ ಎಂದು ಆತನ ಸ್ನೇಹಿತರು ತಿಳಿಸಿದ್ಧಾರೆ. ಅದಲ್ಲದೆ ಇವತ್ತು ಆತ್ಮಹತ್ಯೆ ಮಾಡಿಕೊಳ್ಳುವ ಕೆಲವೇ ಗಂಟೆಗಳ ಮುನ್ನ ನೆಟ್ಲ ಭಾಗದ ಆತನ ಸ್ನೇಹಿತರ ವ್ಯಾಟ್ಸ್ ಆಪ್ ಗ್ರೂಪ್ ನಲ್ಲಿ ಸಾಯುವ ಬಗ್ಗೆ ಪೋಸ್ಟ್ ಮಾಡಿದ್ದ.

ಪೋಸ್ಟ್ ನೋಡಿದ ಈತನ ಸ್ನೇಹಿತರು ಕೂಡಲೇ ಈತತನ್ನು ಸಂಪರ್ಕ ಮಾಡುವ ಪ್ರಯತ್ನ ಮಾಡಿದ್ದಾರೆ,ಆದರೆ ಈತ ಯಾರ ಪೋನ್ ಕೂಡ ರಿಸೀವ್ ಮಾಡಲಿಲ್ಲ.ಇದರ ಜೊತೆಗೆ ಪೋಲಿಸರಿಗೆ ಮೌಖಿಕ ದೂರು ನೀಡಿ ಈತ ಇರುವ ವ್ಯಾಪ್ತಿಯನ್ನು ಗುರುತಿಸಿ ತಿಳಿಸುವಂತೆ ಮನವಿ ಮಾಡಿಕೊಂಡಿದ್ದರು. ಪೋಲೀಸರು ಕಾರ್ಯಪ್ರವೃತ್ತ ರಾಗುವ ಮುನ್ನವೇ ಈತ ಸೇತುವೆಯ ಮೇಲಿನಿಂದ ಹಾರಿ ಪ್ರಾಣಕಳೆದುಕೊಂಡಿದ್ದ. ಬೈಕಿನಲ್ಲಿ ಬಂದ ಈತ ಬೈಕನ್ನು ಸೇತುವೆ ಮೇಲೆ ನಿಲ್ಲಿಸಿ ಚಪ್ಪಲಿಯನ್ನು ಅಲ್ಲೆ ಬಿಟ್ಟು ನೇತ್ರಾವತಿ ನದಿಗೆ ಸೇತುವೆ ಮೇಲಿನಿಂದ ಕಳಕ್ಕೆ ಹಾರಿದ್ಧಾನೆ.

ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಸ್ಥಳೀಯ ಮುಳುಗುತಜ್ಞರು, ಅಗ್ನಿಶಾಮಕ ದಳ ಹಾಗೂ ಪೋಲೀಸರ ಸಹಕಾರದೊಂದಿಗೆ ಮೃತದೇಹವನ್ನು ಪತ್ತೆ ಹಚ್ಚಿ ಮೇಲಕ್ಕೆತ್ರಿದ್ದಾರೆ. ಘಟನಾ ಸ್ಥಳಕ್ಕೆ ನಗರ ಠಾಣಾ ಎಸ್.ಐ. ರಾಮಕೃಷ್ಣ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!