March 16, 2026

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಕಾಂಗ್ರೆಸ್ ನಿಯೋಗ

0
daily-news-and-latest-updates-live-18-may-2023.jpg

ಬೆಂಗಳೂರು: ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ಧರಾಮಯ್ಯ ನೇತೃತ್ವದ ನಿಯೋಗವು ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ.

ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಇದ್ದರು.

ಇದಕ್ಕೂ ಮುನ್ನ, ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದಲ್ಲಿ ಸಿದ್ದರಾಮಯ್ಯ ಅವರನ್ನು ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಯಿತು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿಎಲ್​ಪಿ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ನಿರ್ಣಯ ಮಂಡನೆ ಮಾಡಿದರು. ಈ ನಿರ್ಣಯಕ್ಕೆ ಶಾಸಕರೆಲ್ಲರೂ ಅನುಮೋದಿಸಿದ್ದಾರೆ. ಬಳಿಕ ಸಿದ್ದರಾಮಯ್ಯ ಅವರಿಗೆ ನಾಯಕರು ಹೂಗುಚ್ಛ ನೀಡಿ ಅಭಿನಂದಿಸಿದರು.

Leave a Reply

Your email address will not be published. Required fields are marked *

error: Content is protected !!