March 16, 2026

ಸರ್ಕಾರಿ ಶಾಲೆಯಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಕೊಲೆ

0
image_editor_output_image-2132395556-1684485045463.jpg

ಬೆಳಗಾವಿ: ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಯುವಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬೆಳಗಾವಿ ತಾಲೂಕಿನ ಮಾರೀಹಾಳ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಮಾರಿಹಾಳ ಗ್ರಾಮದ ಮಹಾಂತೇಶ ರುದ್ರಪ್ಪ ಕರಲಿಂಗನವರ್ (23) ಎಂಬ ಯುವಕನನ್ನು ನಾಲ್ಕೈದು ಜನ ಯುವಕರು ಸೇರಿ ಹತ್ಯೆಗೈದಿದ್ದಾರೆ. ಬೆಳಗಾವಿ ಜಿಲ್ಲೆ ಮಾರಿಹಾಳ ಸರ್ಕಾರಿ ಕನ್ನಡ ಶಾಲಾ ಕೊಠಡಿಯ ಎದುರು ಕೊಲೆಯಾದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.

ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಹಳೆಯ ದ್ವೇಷದಿಂದಲೇ ಕೊಲೆಗೈದಿರುವುದು ಮೇಲ್ನೋಟಕ್ಕೆ ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!