June 13, 2026

ಇಂದಿನಿಂದಲೇ ಐದು ಗ್ಯಾರಂಟಿ ಜಾರಿ: ಪ್ರಮಾಣ ವಚನ ಬಳಿಕ ಸಿಎಂ ಸಿದ್ದರಾಮಯ್ಯ ಘೋಷಣೆ

0
image_editor_output_image-1591164394-1684572367885

ಬೆಂಗಳೂರು: ಚುನಾವಣಾ ಸಂದರ್ಭದಲ್ಲಿ ನಾವು ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಇಂದಿನಿಂದಲೇ ಜಾರಿ ಮಾಡುತ್ತೇವೆ ಎಂದು ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕಂಠೀರವ ಮೈದಾನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಇಂದು ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಎಲ್ಲಾ ಐದು ಯೋಜನೆಗಳಿಗೆ ಅನುಮತಿ ನೀಡಿ ಜಾರಿಗೆ ತರುತ್ತೇವೆ. ನುಡಿದಂತೆ ನಡೆಯುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಭಾರತ ಜೋಡೊ ಯಾತ್ರೆಯ ಮೂಲಕ ಪ್ರಚಾರ ಆರಂಭವಾಯ್ತು. ರಾಷ್ಟ್ರೀಯ ನಾಯಕರು ಪಕ್ಷದ ಪರವಾಗಿ ಪ್ರಚಾರ ಮಾಡಿದ್ದಾರೆ. ಅವರಿಗೆ ಧನ್ಯವಾದಗಳು. ಸಾಹಿತಿಗಳೂ ಚಿಂತಕರು, ಸಂಘಟನೆಗಳ ನಾಯಕರು ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ಎಲ್ಲರಿಗೂ ಧನ್ಯವಾದಗಳು ಎಂದರು.

Leave a Reply

Your email address will not be published. Required fields are marked *

error: Content is protected !!