March 16, 2026

ಪ್ರಮಾಣವಚನ ಕಾರ್ಯಕ್ರಮದಲ್ಲಿ ಕಳ್ಳರ ಕೈಚಳಕ

0
image_editor_output_image-381069194-1684592909906.jpg

ಬೆಂಗಳೂರು: ನಗರದ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿದ ಪ್ರಸಂಗ ನಡೆದಿದೆ.

ಸರಗಳ್ಳರು ತಮ್ಮ ಕೈ ಚಳಕ ತೋರಿದ್ದು, ಸರ ಕಿತ್ತು ಓಡ್ತಿದ್ದವರನ್ನು ಬೆನ್ನಟ್ಟಿ ಪೊಲೀಸರು ಹಿಡಿದಿದ್ದಾರೆ. ಸಾರ್ವಜನಿಕರ ಸಹಾಯದೊಂದಿಗೆ ಇಬ್ಬರು ಕಳ್ಳರನ್ನ ಪೊಲೀಸರು ಸೆರೆಹಿಡಿದಿದ್ದಾರೆ.

ಪ್ರಮಾಣವಚನ ಕಾರ್ಯಕ್ರಮ ಮುಗಿದು ಜನ ಹೊರಬರುತ್ತಿದ್ದಂತೆಯೇ ಕಳ್ಳತನ ನಡೆದಿದೆ. ಸದ್ಯ ಇಬ್ಬರೂ ಕಳ್ಳರನ್ನು ಸಂಪಂಗಿ ರಾಮನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಂದು ಮಧ್ಯಾಹ್ನ ಸಿಎಂ ಇದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಜೊತೆ 8 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.

Leave a Reply

Your email address will not be published. Required fields are marked *

error: Content is protected !!