March 16, 2026

ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ. ಅಲೋಕ್ ಮೋಹನ್ ನೇಮಕ

0
n50168055816846028926156a126ccbbeb75580d771c2595f8340952c3ab3eb5338c3758c09678cebf2f27a.jpg

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ. ಅಲೋಕ್ ಮೋಹನ್ ನೇಮಕಗೊಂಡಿದ್ದಾರೆ.

ಪೊಲೀಸ್ ನಿರ್ದೇಶಕರಾಗಿದ್ದ ಪ್ರವೀಣ್ ಸೂದ್‌ ಅವರು ಸಿಬಿಐ ನಿರ್ದೇಶಕರಾಗಿ ನೇಮಕವಾದ ಬಳಿಕ ಸ್ಥಾನಕ್ಕೆ ಪ್ರಸ್ತುತ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಡಿಜಿಪಿಯಾಗಿದ್ದ ಅಲೋಕ್ ಮೋಹನ್‌ ಅವರನ್ನು ನೇಮಿಸಲಾಗಿದೆ.‌

ಅಲೋಕ್ ಮೋಹನ್ 1987ನೇ ಬ್ಯಾಚ್‌ನ ಕರ್ನಾಟಕ ಕೇಡರ್‌ ಐಪಿಎಸ್‌ ಅಧಿಕಾರಿಯಾಗಿದ್ದಾರೆ. ಕಾರಾಗೃಹ ಇಲಾಖೆ ಡಿಜಿಪಿ, ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ ಎಡಿಜಿಪಿ ಸೇರಿ ಹಲವು ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. 2025ರ ಏಪ್ರಿಲ್‌ನಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!